
ಕುಂದಾಪುರದಲ್ಲಿ ಅಕ್ರಮ ಮದ್ಯ ಮಾರಾಟ – ಆರೋಪಿ ಬಂಧನ.
ಉಡುಪಿ: ಕುಂದಾಪುರದಲ್ಲಿ ಅಕ್ರಮ ಮದ್ಯ ಮಾರಾಟ ನಡೆಸುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಮೂಲತಃ ಕೊರ್ಗಿ ಗ್ರಾಮದ ಶೇಷಾದ್ರಿ (43) ಎಂಬಾತನೇ ಬಂಧಿತನಾಗಿದ್ದು, ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಮದ್ಯ ಮಾರಾಟಕ್ಕೆ ನಿಷೇಧ ಜಾರಿಯಲ್ಲಿದ್ದರೂ, ಅಧಿಕಾರಿಗಳ ಆದೇಶವನ್ನು ಉಲ್ಲಂಘಿಸಿ ಯಾವುದೇ ಪರವಾನಗಿ ಇಲ್ಲದೆ ವ್ಯವಹಾರ ನಡೆಸುತ್ತಿದ್ದಾನೆಂದು ಪೊಲೀಸರು ತಿಳಿಸಿದರು.
ಹೆಸ್ಕುತ್ತೂರು ಸಾನ್ವಿ ಕೋಳಿ ಫಾರ್ಮ್ ಹತ್ತಿರ ಅಡಗಿಸಿ ಮದ್ಯ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಲಭಿಸಿದ ಹಿನ್ನೆಲೆಯಲ್ಲಿ ಗ್ರಾಮಾಂತರ ಪೊಲೀಸ್ ಠಾಣೆಯ ಸಿಬ್ಬಂದಿ ದಾಳಿ ನಡೆಸಿ, ಆರೋಪಿ ಶೇಷಾದ್ರಿಯನ್ನು ವಶಕ್ಕೆ ಪಡೆದಿದ್ದಾರೆ.
ಕಾರ್ಯಾಚರಣೆಯ ವೇಳೆ 13,650 ರೂ. ಮೌಲ್ಯದ ಮದ್ಯವನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಈ ಸಂಬಂಧ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








One thought on “NEWS-3”
Yo, Fun88app looks interesting! Been hearing some talk about it. Anyone used it before? Seems like a good place to visit if you are looking for such entertainments: fun88app.
Comments are closed.